ಬೆಂಗಳೂರು: ಕಾಂಗ್ರೆಸ್‌ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ,ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ, ಹೀಗಾಗಿ ಬೇರೆ ಪಕ್ಷದವರ ಜೊತೆ ಮಾತನಾಡುವ ಪ್ರಯತ್ನ ಪಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು. ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ ಎಂದು ತಿಳಿಸಿದರು.
ಹೈಕಮಾಂಡ್ ನಾಯಕರು ವಿಶ್ವಾಸದಲ್ಲಿದ್ದಾರೆ. ನಾವು ಬಹುಮತ ದಾಟ್ತೀವಿ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ, ಮಾಡಲಿ. ಎಲ್ಲ ಪಕ್ಷಗಳೂ ಸಭೆ ಮಾಡ್ತಾರೆ ಎಂದರು. ನಾನು ಮೊದಲಿಂದಲೂ ಒಂದೇ ಮಾತು ಹೇಳ್ತಾ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತೆ ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ನಮಗೆ ವಿಶ್ವಾಸ ಇದೆ. ಮ್ಯಾಜಿಕ್ ನಂಬರ್ ಮುಟ್ತೇವೆ ಕಾಂಗ್ರೆಸ್ ಪಕ್ಷ 2023ರ ಚುನಾವಣೆ 40ಕ್ಕಿಂತ ಹೆಚ್ಚು ಸೀಟು ಗೆಲ್ಲೋದಿಲ್ಲ. 40 ಸೀಟು ಮೇಲೆ ಒಂದೇ ಒಂದು ಸೀಟು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲೋದಿಲ್ಲ ಎಂದರು.