Wednesday, May 31, 2023
spot_img
- Advertisement -spot_img

ಈ ಸರ್ಕಾರ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರ ಥರ ಇದೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಒಂದೇ ಪಕ್ಷದಲ್ಲಿ ಸಮ್ಮಿಶ್ರ ಸರ್ಕಾರ ಇದೆ ಅನ್ನಿಸ್ತಿದ್ದು, ಈ ಸಮ್ಮಿಶ್ರ ಸರ್ಕಾರವೂ ಲೋಕಸಭೆ ಚುನಾವಣೆ ವರೆಗೆ ಮಾತ್ರ ಇರುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಮಾಧ್ಯಮಗಳ ಜೊತೆಗೆ ಮಾತನಾಡಿ, ಮುಖ್ಯಮಂತ್ರಿ ಆಯ್ಕೆ ವಿಚಾರ, ಭಿನ್ನಾಭಿಪ್ರಾಯ ಗಮನಿಸಿದ್ದೇನೆ. ಅವರಲ್ಲಿರುವ ಎರಡು ಬಣಗಳು, ಮಂತ್ರಿಗಳ ಆಯ್ಕೆಯಲ್ಲಿ ಗೊಂದಲ ಎಲ್ಲ ನೋಡಿದ್ದೇವೆ. ಈ ಸರ್ಕಾರ ಒಂದು ರೀತಿಯಲ್ಲಿ ಸಮ್ಮಿಶ್ರ ಸರ್ಕಾರ ಥರ ಇದೆ ಎಂದು ಹೇಳಿದರು.

ನೂತನ ಸರ್ಕಾರ ರಚನೆಯಾಗಿದೆ, ಎಂಟು ಜನ ಸಚಿವರಾಗಿದ್ದಾರೆ, ಈ ಸಚಿವರು ರಾಜ್ಯ, ಜನರ ಹಿತದೃಷ್ಟಿಯಿಂದ ಮಾತಾಡ್ತಿಲ್ಲ, ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಬದಲು ದ್ವೇಷದ ರಾಜಕಾರಣವೇ ಈ ಸರ್ಕಾರಕ್ಕೆ ಪ್ರಮುಖವಾಗಿದೆ, ಅವರು ಏನೇ ಕೇಸ್ ಹಾಕಿದರೂ ಸಮರ್ಥವಾಗಿ ಎದುರಿಸ್ತೇವೆ ಎಂದರು.

40% ಕಮಿಷನ್ಆರೋಪವನ್ನು ನಮ್ಮ ಮೇಲೆ ಅವರು ಹೊರೆಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ದಯವಿಟ್ಟು ಅವರು ಎಲ್ಲ ತನಿಖೆ ಮಾಡಲಿ. ಈ ಸಂಬಂಧ ನಾನು ಆಗ್ರಹ ಮಾಡುತ್ತೇನೆ ಎಂದರು. “ದಾರಿಯಲ್ಲಿ ಹೋಗುವವರಿಗೆ ಉಚಿತ ಭಾಗ್ಯಗಳನ್ನು ಕೊಡಲು ಆಗುತ್ತಾ ಎಂದು ಕೇಳಿದ್ದಾರೆ. ಮನೆಲಿದ್ದವರು, ಬೀದಿಯಲ್ಲಿದ್ದವರು ಎಲ್ಲರೂ ಮತ ಹಾಕಿದ್ದಾರೆ. ಮತದಾರರಿಗೆ ಎಷ್ಟು ಗೌರವ ಕೊಡುತ್ತಾರೆ ಎನ್ನುವುದು ಈಗ ಅರ್ಥವಾಗುತ್ತಿದೆ ಎಂದು ತಿಳಿಸಿದರು.

Related Articles

- Advertisement -

Latest Articles