ಬೆಂಗಳೂರು: ಚಂದನವನದ ಖ್ಯಾತ ನಟ ಸುದೀಪ್ ಬಿಜೆಪಿ ಸೇರ್ಪಡೆ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ನಟ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ ಎರಡು ಸುದ್ದಿಗೋಷ್ಠಿ ಕರೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 1.30ಕ್ಕೆ ಕುಮಾರಪಾರ್ಕ್ ನಲ್ಲಿರುವ ಅಶೋಕ ಹೋಟೆಲ್ನಲ್ಲಿ ಮೊದಲ ಸುದ್ದಿಗೋಷ್ಠಿ ಕರೆದಿರುವ ಸಿಎಂ ಬೊಮ್ಮಾಯಿ, 2.30ಕ್ಕೆ ಕ್ಯಾಪಿಟಲ್ ಹೋಟೆಲ್ನಲ್ಲಿ ಎರಡನೇ ಸುದ್ದಿಗೋಷ್ಠಿ ಕರೆದಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಿಚ್ಚ ಸುದೀಪ್ ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಪಕ್ಷ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಈ ಕುರಿತು ಅಧಿಕೃತವಾಗಿ ಸುದೀಪ್ ಯಾವುದೇ ಹೇಳಿಕೆ ನೀಡಿಲ್ಲ. ಈ ಗೊಂದಲಕ್ಕೆ ಮಧ್ಯಾಹ್ನ ತೆರೆಬೀಳಲಿದೆ.
ನಟ ಸುದೀಪ್ ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇನೆ. ಅವರು ಬಿಜೆಪಿಗೆ ಬಂದರೆ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಆದರೆ ಅವರು ಪಕ್ಷ ಸೇರುತ್ತಾರೆ ಎನ್ನುವ ವಿಷಯದ ಕುರಿತು ಮಾಹಿತಿ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.