ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ.
ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ ಮಾತ ನಾಡಿ, ಕೆಲವು ಹೆಸರುಗಳನ್ನು ಹೊರತುಪಡಿಸಿ ಉಳಿದವುಗಳನ್ನು ಮಂಡಳಿಯ ಒಪ್ಪಿಗೆ ಪಡೆದ ನಂತರ ಪ್ರಕಟಿಸಬಹುದು. ಭಾನುವಾರ ಸಂಜೆ 5 ಗಂಟೆಗೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಬಿಜೆಪಿ 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಎಲ್ಲಾ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸುತ್ತೇವೆ, ಜಿಲ್ಲೆ, ಇತ್ತೀಚಿನ ಸಮೀಕ್ಷೆಯ ಫಲಿತಾಂಶ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ನಾಯಕರೊಂದಿಗೆ ವಿವರವಾದ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು. ಅಂದಹಾಗೆ ಮೂರು ಪಕ್ಷಗಳು ತಮ್ಮದೇ ತಯಾರಿಯಲ್ಲಿದ್ದು, ಮತದಾರ ಗೆಲುವಿನ ವಿಜಯದ ಮಾಲೆ ಯಾರಿಗೆ ಹಾಕಲಿದ್ದಾನೆ ಅನ್ನೋದು ಕಾದುನೋಡಬೇಕಿದೆ.