Thursday, June 8, 2023
spot_img
- Advertisement -spot_img

ಜಗದೀಶ್ ಶೆಟ್ಟರ್ ಮುಂದೆ ಪಶ್ಚಾತ್ತಾಪ ಪಡುತ್ತಾರೆ:ಸಿಎಂ ಬೊಮ್ಮಾಯಿ

ಬೆಂಗಳೂರು : ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟರೆ ಬಿಜೆಪಿಗೆ ನಷ್ಟವಿಲ್ಲ, ಅವರು ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಗೆ ಬಿಜೆಪಿ ದೊಡ್ಡ ದೊಡ್ಡ ಸ್ಥಾನಮಾನ ನೀಡಿದೆ, ಅದರೆ ಇಂದು ಪಕ್ಷ ಬಿಟ್ಟಿರೋದು ಬೇಸರ ತಂದಿದೆ ಎಂದರು. ಆದ್ರ ಮುಂದೆ ಅವರು ಪಶ್ಚಾತ್ತಾಪ ಪಡುತ್ತಾರೆ ಎಂದು ಅಭಿಪ್ರಾಯಪಟ್ಟರು.

ಪಕ್ಷ ದೆಹಲಿ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ರಾಜ್ಯದಲ್ಲಿ ಪಕ್ಷ ದೊಡ್ಡ ಸ್ಥಾನಮಾನ ನೀಡಿತ್ತು. ಅವರು ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದರು. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ.

ಶಾಸಕರು, ಸಚಿವರು, ಸಿಎಂ ಬದಲಾವಣೆ ಮಾಡುವ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ. ಹಲವಾರು ಸರ್ವೆ ಮತ್ತು ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

- Advertisement -spot_img

Latest Articles