ಮೈಸೂರು: ವರುಣಾದಿಂದ ಸೋಮಣ್ಣರನ್ನು ಕಣಕ್ಕಿಳಿಸಿದ್ದು, ಹೀಗಾಗಿ ಈ ಕ್ಷೇತ್ರಕ್ಕೆ ಬಿಜೆಪಿ ಹೆಚ್ಚಿನ ಮಹತ್ವ ಕೊಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂಬಂಧ ಮೈಸೂರಿಗೆ ಬಂದಿದ್ದೇನೆ, ಈ ಬಾರಿ ಬಿಜೆಪಿ ಗೆಲ್ಲಲೇಬೇಕೆಂಬ ಪಣ ತೊಟ್ಟಿದ್ದೇವೆ ಎಂದು ತಿಳಿಸಿದರು. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸೋಮಣ್ಣ ಪ್ರತಿನಿಧಿಸುತ್ತಿದ್ದು, ಬಿಜೆಪಿಯ ಅದ್ಭುತ ಅಭ್ಯರ್ಥಿ ಆಗಿದ್ದಾರೆ, ಅವರು ಕಣಕ್ಕಿಳಿದ ಪರಿಣಾಮ ನಾವು ಈ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ್ದೇವೆ ಎಂದರು.
ಪಕ್ಷಾಂತರ ಆದವರ ವಿರುದ್ಧ ಕೊಂಚ ಬೇಸರಿಸಿದ ಸಿಎಂ ಬೊಮ್ಮಾಯಿ, ಬಿಜೆಪಿಯಲ್ಲಿ ಕಾರ್ಯಕರ್ತರ ದೊಡ್ಡ ದಂಡೆ ಇದೆ. ಹೀಗಾಗಿ ಬಿಟ್ಟು ಹೋಗಿದ್ರಿಂದ ಯಾವುದೇ ತೊಂದರೆ ಆಗಲ್ಲ ಎಂದು ಅಭಿಪ್ರಾಯಪಟ್ಟರು.
ನಾಮಪತ್ರ ಸಲ್ಲಿಕೆಗೂ ಮುನ್ನ ಇತ್ತ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮೈಸೂರಿನ ಇತಿಹಾಸ ಪ್ರಸಿದ್ಧ ಶ್ರೀ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.