Saturday, June 10, 2023
spot_img
- Advertisement -spot_img

ಕರ್ನಾಟಕದ ಅಭಿವೃದ್ಧಿಗೆ ಬಂದು ಮತ ಚಲಾಯಿಸಿ : ಸಿಎಂ ಬೊಮ್ಮಾಯಿ

ಹಾವೇರಿ: “ನಮ್ಮ ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿಯಿಂದ ನನಗೆ ತುಂಬಾ ಸಂತೋಷವಾಗಿದೆ, ಕರ್ನಾಟಕದ ಅಭಿವೃದ್ಧಿಗೆ ಬಂದು ಮತ ಚಲಾಯಿಸುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ,”ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೊಮ್ಮಾಯಿಯವರೊಂದಿಗೆ ಅವರ ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ ದೇವಸ್ಥಾನಕ್ಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಬೊಮ್ಮಾಯಿಯವತು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸಿಎಂ ಬೊಮ್ಮಾಯಿ ಮತದಾನ ಮಾಡುವ ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Related Articles

- Advertisement -spot_img

Latest Articles