ಬಳ್ಳಾರಿ: ನಾಯಿ ನಿಯತ್ತಿನ ಪ್ರಾಣಿಯಾಗಿದೆ. ನಾನು ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ಜನರ ಪರವಾಗಿ ನಿಯತ್ತನ್ನ ಉಳಿಸಿಕೊಂಡು ಹೋಗುವೆ. ಅವರ ಹಾಗೆ ಸಮಾಜ ಒಡೆಯುವ ಕೆಲಸ ಮಾಡಲ್ಲ. ಸೌಭಾಗ್ಯ ಕೊಡುತ್ತೇವೆ ಅಂತಾ ದೌರ್ಭಾಗ್ಯ ಕೊಟ್ಟಿಲ್ಲ ಎಂದು ಸಿಎಂ ಬೊಮ್ಮಾಯಿ ಸಿದ್ದರಾಮಯ್ಯಗೆ ನಯವಾಗಿ ಉತ್ತರಿಸಿದರು.
ಮಾಜಿ ಸಿಂ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಅವರು ನರೇಂದ್ರ ಮೋದಿ ಅವರ ಮುಂದೆ ನಾಯಿಮರಿಯಂತೆ ಇರುತ್ತಾರೆ. ರಾಜ್ಯಕ್ಕೆ ಒಂದಿಷ್ಟು ಅನುದಾನವನ್ನು ತರುವ ಸಾಮರ್ಥ್ಯವೂ ಇಲ್ಲ ಎಂದು ಹೇಳಿಕೆ ನೀಡಿದ್ದರು. ಜನರಿಗಾಗಿ ನಿಯತ್ತಾಗಿ ಕೆಲಸ ಮಾಡ್ತೀನಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ. ಇಂತಹ ಕೀಳುಮಟ್ಟದ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದರು.
ಸಿದ್ದರಾಮಯ್ಯನಿಗೆ ಒಂದು ನಯಾಪೈಸೆ ಅನುದಾನ ತರಲು ಸಾಧ್ಯವಾಗಿಲ್ಲ. ರಾಜ್ಯಕ್ಕೆ ಅವರ ಕೊಡುಗೆ ಏನಿಲ್ಲ. ಮೋದಿ ಕೊಡುವ ಕಾಮಧೇನು ಆಗಿದ್ದು, ಅದರ ಬಗ್ಗೆ ಜ್ಞಾನ ಇಲ್ಲ. ರಾಜಕೀಯ ಹೇಳಿಕೆ ಕೊಡುವುದು ಸಿದ್ದರಾಮಯ್ಯ ರೂಡಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.