Tuesday, March 28, 2023
spot_img
- Advertisement -spot_img

ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭ : ಮುಖ್ಯಮಂತ್ರಿಗಳಿಂದ ಶುಭಾಶಯ

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಈ ಬಾರಿ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರುತ್ತದೆ ಎಂದು ಸಚಿವ ಬಿಸಿ ನಾಗೇಶ್ ಹೇಳಿದ್ದರು. ಪರೀಕ್ಷೆಗೆ ಹಾಜರಾಗುವ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ.

ಕಳೆದ ವರ್ಷ ಹಿಜಾಬ್​ಗೆ ಪಟ್ಟು ಹಿಡಿದಿದ್ದ 6 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿರಲಿಲ್ಲ. ರಾಜ್ಯದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,716 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್ ಆಗಲಿವೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ.

Related Articles

- Advertisement -

Latest Articles