ಚಿಕ್ಕೋಡಿ : ನೀರು ಕೊಡದವರು ಉಚಿತವಾಗಿ ಮಜ್ಜಿಗೆ ನೀಡುತ್ತಾರಾ? ಕಾಂಗ್ರೆಸ್ ಮತ್ತು ಬಿಜೆಪಿಯವರು ಎಲ್ಲಾ ಸುಳ್ಳು ಹೇಳುತ್ತಾರೆ. ಆದ್ರೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತ್ರ ಹೇಳಿದಂತೆ ನಡೆಯುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹೇಳಿದಂತೆ ನಡೆಯುವುದು ಜೆಡಿಎಸ್ ಮಾತ್ರ. ವಿಧಾನಸಭಾ ಚುನಾವಣೆಯಲ್ಲಿ ನಾವು ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾಗಿ ಬರುತ್ತೇವೆ. ಪಂಚರತ್ನ ಯಾತ್ರೆಯಲ್ಲಿ ಹೇಳಿದಂತೆ ನಾವು ನಡೆಯುತ್ತೇವೆ ಎಂದರು.
“ಪೆಟ್ರೋಲ್, ಡೀಸೆಲ್, ಎಣ್ಣೆ, ಅಕ್ಕಿ ರೇಟ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಕಾಲ ಭಾರತಕ್ಕೆ ಬರುವ ವಿಶ್ವಾಸವಿದೆ. ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 123 ಸ್ಥಾನ ಪಡೆಯುತ್ತೇವೆ. ಬೆಳಗಾವಿ, ಚಿಕ್ಕೋಡಿಯಲ್ಲಿ ಏಳು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದರು.
ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು? ಪ್ರಶ್ನೆಗೆ ಉತ್ತರಿಸಿ, ಮೊದಲು ಬಿಜೆಪಿಯವರು ಉತ್ತರ ಕೊಡಲಿ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಎಲ್ಲಿ ನಿಲ್ಲುತ್ತಾರೆ ಎಂದು ಹೇಳಲಿ ಎಂದರು. ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದೆ. ಈಗಾಗಲೇ ನಾವು 93 ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ್ದೇವೆ. ಬಿಜೆಪಿಯವರು ಒಂದೂ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿಲ್ಲ ಎಂದು ಹೇಳಿದರು.