ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರಿಷ್ಠ ಹೆಚ್.ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರದಲ್ಲಿ ಮುನಿಸಿಕೊಂಡಿದ್ದ ಅವರು ಪಕ್ಷದ ವಿರುದ್ಧ ಹೇಳಿಕೆಗಳ ನೀಡಿದ್ದರು ಎಂಬ ಆರೋಪಗಳಿವೆ.
ಇದನ್ನೂ ಓದಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು!
ಈ ಮೊದಲು ರಾಜ್ಯಾಧ್ಯಕ್ಷರಾಗಿದ್ದಾಗ ಸಿಎಂ ಇಬ್ರಾಹಿಂ ಈ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ತಾನೇ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡು ಪ್ರತ್ಯೇಕ ಸಭೆ ನಡೆಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.


ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.