ಮೈಸೂರು : ಇಂದು ಒಂದೇ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೈಸೂರಿಗೆ ಭೇಟಿ ನೀಡಲಿದ್ದಾರೆ.
ತವರು ಜಿಲ್ಲೆಗೆ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ, ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಚಿವರು, ಶಾಸಕರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಂಜೆ ಗಂಗೋತ್ರಿಯ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿರುವ ಸಿಎಂ, ರಾತ್ರಿ ನಗರದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ : ನಾಳೆ ಮಹತ್ವದ ಘೋಷಣೆ ಮಾಡ್ತೇನೆ : ಹೆಚ್.ಡಿ ದೇವೇಗೌಡ
ಅತ್ತ ಸಿಎಂ ಮೈಸೂರು ಪ್ರವಾಸ ಕೈಗೊಂಡರೆ, ಇತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಸಾಂಸ್ಕೃತಿಕ ನಗರಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿರುವ ಹಿನ್ನೆಲೆ, ಇಂದು ಸಂಜೆ 4 ಗಂಟೆಗೆ ಡಿಸಿಎಂ ಡಿಕೆಶಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ರಾತ್ರಿ ನಗರದಲ್ಲೇ ಉಳಿದುಕೊಳ್ಳಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.