ವಿಜಯಪುರ : ಉತ್ತರ ಕರ್ನಾಟಕದ ಜೀವನಾಡಿ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಬಾಗಿನ ಅರ್ಪಿಸಿದರು.
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದ ಕೃಷ್ಣಾ ನದಿಗೆ ಬಾಗಿನಕ್ಕೂ ಮುನ್ನ, ಗಂಗಾಪೂಜೆ ನೆರವೇರಿಸಿದ ಸಿಎಂ ಹಾಗೂ ಡಿಸಿಎಂ ಸೇರಿದಂತೆ ಸಚಿವರು ನಂತರ ಕೃಷ್ಣೆಗೆ ಬಾಗಿನ ಬಿಟ್ಟು ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ : ‘ಬಿ ಎಲ್ ಸಂತೋಷ್ ಸುಳ್ಳು ಹೇಳಿಕೆಗಳನ್ನು ನೀಡಬಾರದು’ : ಬಿ ನಾಗೇಂದ್ರ
ಬಳಿಕ ಮುಖ್ಯಮಂತ್ರಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದಕ್ಕೂ ಮುನ್ನ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬಳ್ಳಾರಿಗೆ ತಲುಪಿ ಸಿಎಂ ಹಾಗೂ ಸಚಿವರು, ಬಳಿಕ ಅಲ್ಲಿನ ಜಿಂದಾಲ್ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಪ್ರಯಾಣ ಬೆಳೆಸಿದ್ದರು.
ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಚಿವರಾದ ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ, ಆರ್.ಬಿ.ತಿಮ್ಮಾಪುರ, ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಸೇರಿದಂತೆ ವಿಜಯಪುರ- ಬಾಗಲಕೋಟ, ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಈ ವೇಳೆ ಸಾಥ್ ನೀಡಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.