ಸಿಎಂ ಸ್ಥಾನ ಬದಲಾವಣೆ ವಿಚಾರಕೇಳ್ತಿದ್ದಂತೆ ರೊಚ್ಚಿಗೆದ್ದ ಸಿದ್ದು

ಬೆಂಗಳೂರು : ನವೆಂಬರ್ 21ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿದೆ. ಈ ಬಗ್ಗೆ ವರದಿಗಳು ಹರಿದಾಡುತ್ತಿದ್ದಂತೆಯೇ, ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಪದಿಂದ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ. ಪತ್ರಕರ್ತರೊಬ್ಬರು ನವೆಂಬರ್ 21 ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಸುದ್ದಿ ಬಂದಿದೆ. ಅದರಲ್ಲಿ ಎಷ್ಟು ಸತ್ಯ? ಎಂದು ಕೇಳಿದಾಗ, ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲವಾದ್ರು. ಏರು ಧ್ವನಿಯಲ್ಲಿ ಮಾತನಾಡುತ್ತಾ? ನಿನಗೆ ಹೇಳಿದ್ರಾ? ನಿನ್ಗೆ ಹೇಗೆ ಗೊತ್ತಾಯ್ತು? ಯಾವ ಪತ್ರಿಕೆಯಲ್ಲಿ ನೋಡಿದೀಯಾ? ನಾನೂ ಎಲ್ಲಾ ಪತ್ರಿಕೆ ಓದುತ್ತೇನೆ. ನಾನು ಎಲ್ಲೂ ನೋಡಿಲ್ಲ ಎಂದು ತೀವ್ರ ಕೋಪದಿಂದಲೇ ಪ್ರತಿಕ್ರಿಯೆ ನೀಡಿದ್ರು.

ನವೆಂಬರ್‌ನಲ್ಲಿ ಕ್ರಾಂತಿ? ಡಿಕೆಶಿ ಕಡೆಯಿಂದ ಹೈಕಮಾಂಡ್‌ಗೆ ಸಂದೇಶ ಪಕ್ಷದ ಆಂತರಿಕ ವರದಿಗಳ ಪ್ರಕಾರ, ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್‌ಗೂ, ತಮ್ಮ ಆಪ್ತ ಶಾಸಕರಿಗೂ ನವೆಂಬರ್‌ನಲ್ಲಿ ಕ್ರಾಂತಿಯಾಗಬೇಕೆಂದು ಆಗಬೇಕೆಂಬ ಸಂದೇಶವನ್ನು ರವಾನಿಸಿರುವುದಾಗಿ ತಿಳಿದುಬಂದಿದೆ. ಡಿಕೆಶಿ ಅವರು ನವೆಂಬರ್ 21ರೊಳಗೆ ತಾನೇ ಸಿಎಂ ಆಗಬೇಕು ಎಂದು ಹೈಕಮಾಂಡ್‌ಗೆ ಸ್ಪಷ್ಟವಾಗಿ ತಿಳಿಸಿದ್ದಾರಂತೆ. ಅಷ್ಟೇ ಅಲ್ಲದೆ, ಡಿಕೆಶಿ ಅವರು ಸಿದ್ದರಾಮಯ್ಯ ಆಪ್ತರೊಬ್ಬರಿಗೂ ಕರೆ ಮಾಡಿ ನಿಗದಿತ ದಿನಾಂಕದೊಳಗೆ ಬದಲಾವಣೆ ಆಗದಿದ್ದರೆ ಮುಂದೇನು ಮಾಡಬೇಕೆಂದು ನನಗೆ ಗೊತ್ತಿದೆ ಎಂದು ಎಚ್ಚರಿಕೆ ಸಹ ನೀಡಿದ್ದಾರಂತ ಅಷ್ಟೇ ಅಲ್ಲದೆ, ರಾಹುಲ್ ಗಾಂಧಿ ಅವರ ಅತ್ಯಂತ ಆಪ್ತರ ಬಳಿಗೂ ಇದೇ ಸಂದೇಶವನ್ನು ರವಾನಿಸಿದ್ದಾರಂತೆ. ಪಕ್ಷದ ಹಿತಕ್ಕಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಭಾವನಾತ್ಮಕ ಮನವಿ ಅವರಿಂದ ಹೈಕಮಾಂಡ್‌ಗೆ ಹೋಗಿರುವುದಾಗಿ ಆಂತರಿಕ ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *