ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಯೋಗಕ್ಷೇಮ ವಿಚಾರಿಸಿ, ಆರೋಗ್ಯ ಚೇತರಿಕೆಗೆ ಹಾರೈಸಿದ್ದಾರೆ.
ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ಬೊಮ್ಮಾಯಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಅಪೋಲೋ ಆಸ್ಪತ್ರೆಗೆ ಕರೆ ಮಾಡಿ, ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೂ ಅನಿತಾ ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆಯ ಮೂಲಕ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿ, ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದರು.
ಇನ್ನು ಹಾಸನ ಸಂಸದರಾದ ಪ್ರಜ್ವಲ್ ರೇವಣ್ಣ ಕೂಡ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ, ಚಿಕ್ಕಪ್ಪ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ನನ್ನ ರಾಜಕೀಯ ಕೆಲಸಗಳಿಂದ ಬರುವುದು ತಡವಾಯಿತು. ಕುಮಾರಣ್ಣ ಆರೋಗ್ಯವಾಗಿದ್ದಾರೆ ಎಂದರು.
ಅವರು ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುತ್ತಾರೆ. ಯಾವುದೇ ಕಾರ್ಯಕರ್ತರು ಧೃತಿಗೆಡಬೇಡಿ. ಕುಮಾರಣ್ಣ ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸುತ್ತಾರೆ ಎಂದು ಧೈರ್ಯ ತುಂಬಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.