ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಕಾವೇರಿ ನದಿ ನೀರು ವಿವಾದ ಹೊಸ ಆತಂಕ ತಂದೊಡ್ಡಿದೆ. ಮಂಡ್ಯ, ಮೈಸೂರು ಭಾಗದಲ್ಲಿ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ. ಈ ನಡುವೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಂಪುಟ ಸಭೆಯಲ್ಲಿ ಚರ್ಚೆಯಾಗದೆ ಉಳಿದಿದ್ದ ವಿಷಯಗಳ ಕುರಿತಂತೆ ಶಾಸಕರು, ಸಚಿವರ ಜೊತೆಗಿನ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧರಿಲಾಗಿದೆ.
ಇದನ್ನೂ ಓದಿ: ‘ನಮ್ಮ ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಬರುವವರಿಗೆ ಸ್ವಾಗತ’
ಕಾವೇರಿ ನೀರು ಹಂಚಿಕೆ ವಿಚಾರವಾಗಿ ರೈತರ ಪ್ರತಿಭಟನೆ ಹಾಗೂ ಇದನ್ನೇ ಅಸ್ತ್ರವಾಗಿಸಿರುವ ಬಿಜೆಪಿಗೆ ಕಡಿವಾಣ ಹಾಕುವ ಸಂಬಂಧ ತಂತ್ರ ರೂಪಿಸಲು ಈ ಸಭೆ ಕರೆಯಲಾಗಿದೆ ಎಂದು ತಿಳಿದುಬಂದಿದೆ. ಇದರ ಜೊತೆ ಕಲುಷಿತ ನೀರಿನಿಂದ ಉಂಟಾದ ಸಾವು-ನೋವು, ನಾಯಕರ ಜೊತೆಗಿನ ಸಮನ್ವಯ ಕೊರತೆ, ಘರ್ ವಾಪ್ಸಿ, ಶಾಸಕ ಪತ್ರ, ಗ್ಯಾರಂಟಿ ಯೋಜನೆ ಸಂಬಂಧ ಕೇಳಿಬರುತ್ತಿರುವ ನ್ಯೂನತೆಗಳ ಕುರಿತಂತೆಯೂ ಚರ್ಚೆಯಾಗಲಿದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.