Wednesday, November 29, 2023
spot_img
- Advertisement -spot_img

ಸಂವಿಧಾನ ಪೀಠಿಕೆ ವಾಚನಕ್ಕೆ ಆಹ್ವಾನ ನೀಡಿದ್ರೂ ಜೆಡಿಎಸ್‌-ಬಿಜೆಪಿ ಗೈರು: ಸಿಎಂ ವಿಷಾದ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು ವಿಧಾನಸೌಧದ ಬಳಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದರೂ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಗೈರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಜಾತಿ, ಧರ್ಮ, ಪಕ್ಷ, ಪಂಥವನ್ನು ಮೀರಿ ದೇಶದ ಸಂವಿಧಾನಕ್ಕೆ ಗೌರವ ನೀಡಬೇಕಾಗಿರುವುದು ಭಾರತದ ಪ್ರಜೆಗಳಾದ ನಮ್ಮೆಲ್ಲರ ಪವಿತ್ರ ಕರ್ತವ್ಯ. ರಾಜ್ಯ ಸರ್ಕಾರ ಇಂದು ಆಯೋಜಿಸಿದ್ದ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಐತಿಹಾಸಿಕ ಕಾರ್ಯಕ್ರಮಕ್ಕೆ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನು ಆಹ್ವಾನಿಸಿದ್ದರೂ ಅವರು ಗೈರುಹಾಜರಾಗಿರುವುದು ವಿಷಾದನೀಯ ಎಂದಿದ್ದಾರೆ.

ಇದನ್ನೂ ಓದಿ: ಸಂವಿಧಾನ ವಿರೋಧಿಗಳ ಬಗ್ಗೆ ಸದಾ ಎಚ್ಚರವಾಗಿರಬೇಕು : ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಕೊಡುವ ಗೌರವಕ್ಕಿಂತ ಮಿಗಿಲಾದ ದೇಶಪ್ರೇಮ ಬೇರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಸಂವಿಧಾನ ವಿರೋಧಿಸುವವರ ಬಗ್ಗೆ ಸದಾ ಎಚ್ಚರವಾಗಿರಬೇಕು. ಕೆಲವು ಕೋಮುವಾದಿಗಳು ಮನುಸ್ಮೃತಿ ಜಾರಿಗೆ ತರಲು ಬಯಸ್ತಿದ್ದಾರೆ. ಅಂತವರನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಬೆಳೆಯಬೇಕು ಎಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮೆಟ್ಟಿಲ ಮೇಲೆ ನಡೆದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಮಾತನಾಡಿದರು.

ಭಾರತ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ತಿತ್ವದಲ್ಲಿತ್ತು. ಈ ಬಗ್ಗೆ ಇತಿಹಾಸ ಪುಟಗಳಲ್ಲಿ ಉಲ್ಲೇಖವಿದೆ. ಬಸವಣ್ಣ ಅನುಭವ ಮಂಟಪ ಕಟ್ಟಿ, ಅದರ ಅಧ್ಯಕ್ಷತೆ ಅಲ್ಲಮ ಪ್ರಭುವಿಗೆ ವಹಿಸಿದ್ದರು. ಬೌದ್ಧರ ಕಾಲದಲ್ಲಿ ಸಂಘಗಳ ರಚನೆ ಮಾಡಲಾಗುತ್ತಿತ್ತು. ಸಿಂಧೂ ನಾಗರಿಕತೆಯಲ್ಲೂ ಪ್ರಜಾಪ್ರಭುತ್ವದ ಕಲ್ಪನೆ ಇತ್ತು. ಮೊದಲು ಗಣತಂತ್ರ ವ್ಯವಸ್ಥೆ ಎಂದು ಕರೆಯುತ್ತಿದ್ದರು. ಬಳಿಕ ಅದು ಜನತಂತ್ರ ಆಯಿತು. ದೇಶದಲ್ಲಿ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಸಂವಿಧಾನವನ್ನು ಅರ್ಥ ಮಾಡಿಕೊಂಡಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles