Sunday, October 1, 2023
spot_img
- Advertisement -spot_img

ಪ್ರತಿ ವಿದ್ಯಾರ್ಥಿಗೂ ಉಚಿತ ಲ್ಯಾಪ್‌ಟಾಪ್‌: ಸಿಎಂ ಮಹತ್ವದ ಘೋಷಣೆ!

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್‌ಟಾಪ್‌ ವಿತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ವಿ.ವಿ.ಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ‘ಬಿಜೆಪಿ-ಜೆಡಿಎಸ್‌ನಿಂದ ಸಾಕಷ್ಟು ಜನ ಬರ್ತಾರೆ’

ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ 230 ಕೋಟಿ ರೂಪಾಯಿ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಇದೀಗ ಕಾಂಗ್ರೆಸ್‌ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ ಸಿಕ್ಕಂತಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles