ಮೈಸೂರು: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜನರ ತೀರ್ಪು ಕಾಂಗ್ರೆಸ್ ಪರವಾಗಲಿದೆ, ಈ ಬಾರಿ ಕಾಂಗ್ರೆಸ್ ಹೊಸ ಉತ್ಸಾಹದೊಂದಿಗೆ ಎಲ್ಲ ಐದು ರಾಜ್ಯಗಳನ್ನು ಅಧಿಕಾರ ಪಡೆಯಲು ಶ್ರಮಿಸ್ತಿದ್ದೇವೆ ಎಂದರು. ಮೋದಿಗೆ ನನ್ನ ಕಂಡರೆ ಭಯ. ಹೀಗಾಗಿಯೇ ಪಂಚ ರಾಜ್ಯ ಚುನಾವಣೆಯಲ್ಲಿ ನಮ್ಮ ಬಗ್ಗೆ ಮಾತನಾಡುತ್ತಾರೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಯ ಸಿಗಲಿದೆ ಎಂದರು.
ಇದನ್ನೂ ಓದಿ: ವಿಡಿಯೋದಲ್ಲಿ ಸಿಎಂ ಪುತ್ರ ಯತೀಂದ್ರ ಹೇಳಿದ ವಿವೇಕಾನಂದ ಇವ್ರೇನಾ?
ತೆಲಂಗಾಣ, ಮಧ್ಯಪ್ರದೇಶ್, ಛತ್ತೀಸ್‌ಗಡ, ರಾಜ್ಯಸ್ಥಾನ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲುತ್ತೆ. ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಈಗ ನವೆಂಬರ್ ನಲ್ಲಿ ಇದ್ದೇವೆ. ಲೋಕಸಭೆ ಚುನಾವಣೆಗೆ ಮಾರ್ಚ್ ಕೊನೆಯಲ್ಲಿ ನೋಟಿಫಿಕೇಷನ್ ಆಗಲಿದೆ ಎಂದು ತಿಳಿಸಿದರು.
ಹಳೇ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಗತ್ಯವಿದ್ದರೆ ಕುಮಾರಸ್ವಾಮಿ ವಿರುದ್ಧವೂ ತನಿಖೆ ನಡೆಸಲು ಹಿಂದೆ ಬೀಳಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಬಿಟ್ ಕಾಯಿನ್, ಕೋವಿಡ್, ಮೆಡಿಕಲ್ ಕಾಲೇಜು ಮಂಜೂರಾತಿ, ಶೇ.40 ಕಮಿಷನ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.
ಇದನ್ನೂ ಓದಿ: ಸುದ್ದಿಗೋಷ್ಠಿ ಕರೆದ ಮಾಜಿ ಸಂಸದ ಮುದ್ದಹನುಮೇಗೌಡ: ಮತ್ತೆ ‘ಕೈ’ ಹಿಡಿಯುವ ಸಾಧ್ಯತೆ
ಜನವರಿ 22ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು ಇದೇ ವೇಳೆ ತಮ್ಮ ಮತ್ತು ತಮ್ಮ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳು ರಾಜಕೀಯ ಪ್ರೇರಿತ ಎಂದು ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.