Sunday, September 24, 2023
spot_img
- Advertisement -spot_img

‘ಜಾತ್ಯಾತೀತ ಅಂದ್ಕೊಂಡು ಕೋಮುವಾದಿಗಳ ಜೊತೆ ಕೈ ಜೋಡಿಸಿದ್ದಾರೆ’

ಹುಬ್ಬಳ್ಳಿ : ‘ಜಾತ್ಯಾತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಕೈ ಜೋಡಿಸಿದ್ದಾರೆ’ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದಾಗ ನನ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಜೆಡಿಎಸ್ ನವರು ಅಧಿಕಾರಕ್ಕಾಗಿ ಯಾರ ಜೊತೆಯೂ ಹೋಗ್ತಾರೆ ಎಂದರು.

ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ರಾಷ್ಟ್ರಪತಿಗಳು ಔತಣಕೂಟಕ್ಕೆ ಕರೆದಿದ್ದಾರೆ. ಆದರೆ, ನಾನು ಹೋಗಲ್ಲ. ನಾನು ಜಿ20 ಸದಸ್ಯ ಅಲ್ಲ ಎಂದರು. ನನ್ನ ಅಭಿಮಾನಿಗಳಿಗೆ ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂಬ ಅಪೇಕ್ಷೆ ಇದೆ. ಆದರೆ, ನಾನು ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಹೇಳಿದರು.

ಇದನ್ನೂ ಓದಿ : ಶೀಘ್ರವೇ ಕ್ರೈಸ್ತ ನಿಗಮ ಸ್ಥಾಪನೆ, ಅಧ್ಯಕ್ಷರ ನೇಮಕ: ಸಿಎಂ

ಜಿ20 ಶೃಂಗಸಭೆಯ ಅಂಗವಾಗಿ ರಾಷ್ಟ್ರಪತಿ ಆಯೋಜಿಸಿರುವ ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿದ ಸಿಎಂ, ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ, ರಾಜ್ಯಸಭೆಯ ವಿಪಕ್ಷ ನಾಯಕರೂ ಹೌದು. ಅವರನ್ನು ಔತಣಕೂಟಕ್ಕೆ ಆಹ್ವಾನಿಸದಿರುವುದು ತಪ್ಪು ಎಂದರು.

ಕೇಂದ್ರ ಉತ್ತರಿಸುತ್ತಿಲ್ಲ : ಬರಗಾಲ ಘೋಷಣೆಗೆ ನಿಯಮ ತಿದ್ದುಪಡಿ ಮಾಡುವಂತೆ ಕೇಂದ್ರಕ್ಕೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ, ಕೇಂದ್ರ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಬರ ಘೋಷಣೆ ವಿಚಾರದಲ್ಲಿ ಹಳೆಯ ಮಾನದಂಡಗಳನ್ನೇ ಅನುಸರಿಸಲಾಗುತ್ತಿದೆ. ಇದರಿಂದಾಗಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ತೊಡಕಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತದೆ. ಆದರೆ, ಕೇಂದ್ರ ಸರ್ಕಾರವು ತನ್ನ ನೆರವನ್ನು ನೀಡಬೇಕಲ್ಲವೇ ಎಂದರು.

ಕೇಂದ್ರ ಸರ್ಕಾರ ಅರಣ್ಯ ಮತ್ತು ಪರಿಸರ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ಪ್ರಮಾಣಪತ್ರ ಕಳಿಸಿಲ್ಲ. ಮೊದಲು ಕೇಂದ್ರ ಸರ್ಕಾರ ಕ್ಲಿಯರೆನ್ಸ್ ಕಳಿಸಲಿ, ನಾವು ಪ್ರಧಾನಿಯವರಿಗೆ ಸಮಯ ಕೇಳಿದ್ದೇವೆ. ಮಹದಾಯಿ, ಕೃಷ್ಣಾ,‌ ಕಾವೇರಿ‌ ಸೇರಿದಂತೆ ಹಲವು ವಿಚಾರದ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ನಿಯೋಗದೊಂದಿಗೆ ಬರುತ್ತೇವೆ ಅಂತ ಹೇಳಿದ್ದೇನೆ. ಅದರೆ ಪ್ರಧಾನಿ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles