ಬೆಂಗಳೂರು : ಜಿಲ್ಲಾವಾರು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿ (ಡಿಸಿ) ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಸಭೆ ಕರೆದಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ವರ್ಚುವಲ್ ವೇದಿಕೆ ಮೂಲಕ ಸಿಎಂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ಪರಿಣಾಮವಾಗಿ ಆಗ್ತಿಲ್ಲ ಎಂಬ ದೂರು ಕೇಳಿ ಬಂದಿರುವ ಹಿನ್ನೆಲೆ ಸಿಎಂ ಅಧಿಕಾರಿಗಳ ಸಭೆ ಕರೆದಿದ್ದು, ಇಂದಿನಿಂದ ಮೂರು ದಿನಗಳ ಕಾಲ ಸರಣಿ ಸಭೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ.
ಇದನ್ನೂಓದಿ : ಕುರಿ ಮೇಯಿಸುತ್ತಿದ್ದ ಬಾಲಕನನ್ನು ಶಾಲೆಗೆ ಕರೆತಂದ ಸಿಎಂ
ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಮಳೆ ಕೊರತೆ, ಬರಗಾಲ ಪರಿಸ್ಥಿತಿಯ ಬಗ್ಗೆಯೂ ಸಿಎಂ ಆಯಾ ಜಿಲ್ಲೆಗಳ ಡಿಸಿ ಮತ್ತು ಸಿಇಒಗಳಿಂದ ಮಾಹಿತಿ ಪಡೆಯಲಿದ್ದಾರೆ. ಇಂದು ಡಿಸಿ, ಸಿಇಒಗಳ ಜೊತೆ ಚರ್ಚೆ ನಡೆಸಲಿರುವ ಸಿಎಂ, ನಾಳೆಯಿಂದ ಎಸಿಪಿಯಿಂದ ಮೇಲ್ಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿಗಳು ಜಾರಿಯಾಗಿವೆ. ರಾಜ್ಯದ ಕೆಲವೆಡೆ ಇನ್ನೂ ಗ್ಯಾರಂಟಿ ಯೋಜನೆಗಳ ಲಾಭ ಫಲಾನುಭವಿಗಳಿಗೆ ದೊರೆತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಈ ಕುರಿತು ಸಿಎಂ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.