ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಂಎಂ ಬದಲಾವಣೆ ಚರ್ಚೆ ತಾರಕಕ್ಕೇರಿದೆ. ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನರ್ ರಚನೆ ಸೇರಿದಂತೆ ಹಲವು ವಿಚಾರಗಳು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ತೆರಳಿದ್ದಾರೆ. ಅಧಿಕಾರದ ಬದಲಾವಣೆ ಕುರಿತು ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಮಹತ್ವದ ಚರ್ಚೆಗೆ ಮುಖ್ಯಮಂತ್ರಿಗಳ ಜೊತೆ ಬೆಂಬಲಿಗ ಶಾಸಕರು ಆಗಮಿಸ್ತಾರೆ ಅನ್ನೋ ಮಾಹಿತಿ ಇತ್ತು. ಇತ್ತ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವ ಜಮೀರ್ ಅಹಮ್ಮದ್, ಈಶ್ವರ ಖಂಡೆ ಸೇರಿದಂತೆ ಕೆಲ ಪ್ರಮುಖ ನಾಯಕರು ಜಮಾಯಿಸಿದ್ದರು. ಆದರೆ ಖರ್ಗೆ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಆಗಮಿಸಿದ್ದಾರೆ. ಇವರ ಜೊತೆ ಯಾವುದೇ ಶಾಸಕರು ಆಗಮಿಸಿಲ್ಲ.

ಅರಮನೆ ಮೈದಾನದಲ್ಲಿ ನಡೆದ ಸಚಿವ ಡಿ ಸುಧಾಕರ್ ಪುತ್ರನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಬಳಿಕ ನೇರವಾಗಿ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭಾರಿ ಭಿಗಿ ಭದ್ರತೆ ನಿಯೋಜಿಸಲಾಗಿದೆ. ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಮಲ್ಲಿಕಾರ್ಜುನ್ ಖರ್ಗೆ ನಿವಾಸದ ರಸ್ತೆ ಬಂದ್ ಮಾಡಲಾಗಿದೆ.ಎಐಸಿಸಿ ಅಧ್ಯಕ್ಷರ ಮನೆಯ ನೂರು ಮೀಟರ್ ಅಂತರದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.


Leave a Reply

Your email address will not be published. Required fields are marked *