Sunday, September 24, 2023
spot_img
- Advertisement -spot_img

ಸಾಹಿತಿಗಳಿಗೆ ಬೆದರಿಕೆ ಬಗ್ಗೆ ಉನ್ನತ ತನಿಖೆಗೆ ಸಿಎಂ ಭರವಸೆ

ಬೆಂಗಳೂರು: ರಾಜ್ಯದ ಹಲವು ಸಾಹಿತಿಗಳಿಗೆ ಬೆದರಿಕೆ ಕರೆ ಮತ್ತು ಪತ್ರಗಳು ಬರುತ್ತಿರುವ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಬೆದರಿಕೆ ಎದುರಿಸುತ್ತಿರುವ ಸಾಹಿತಿಗಳ ಜತೆ ಸಿಎಂ ಇಂದು ಸಭೆ ನಡೆಸಿದರು.

‘ಬೆದರಿಕೆಯ ಮೂಲವನ್ನು ಪತ್ತೆ ಹಚ್ಚಲು ಅತ್ಯುತ್ತಮ ಪೊಲೀಸ್‌ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗುವುದು. ಸಾಹಿತಿಗಳು ಮತ್ತು ಹೋರಾಟಗಾರರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಸಿದ್ದರಾಮಯ್ಯ ಭರವಸೆ ನೀಡಿದರು.

ಸಾಹಿತಿ ಕೆ.ಮರುಳಸಿದ್ದಪ್ಪ ಮಾತನಾಡಿ, ‘ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಮತ್ತು ಹೋರಾಟಗಾರರು ಭಯ, ಆತಂಕ ಮತ್ತು ಮುಜುಗರದಿಂದ ಜೀವನ ನಡೆಸುವಂತಾಗಿದೆ. ಉನ್ನತ ಮಟ್ಟದ ತನಿಖೆ ನಡೆಸಿ ಬೆದರಿಕೆ ಹಾಕುತ್ತಿರುವವರನ್ನು ಪತ್ತೆಹಚ್ಚಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು’ ಎಂದು ಕೇಳಿಕೊಂಡರು.

ಇದನ್ನೂ ಓದಿ: BIG BREAKING : ಚಂದ್ರಯಾನ-3 ಯಶಸ್ವಿ : ಹೊಸ ಇತಿಹಾಸ ಬರೆದ ಭಾರತ

‘ಈವರೆಗೆ ಸುಮಾರು 15 ಬೆದರಿಕೆ ಪತ್ರಗಳು ಬಂದಿವೆ. ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕವೂ ಮೂರು ಪತ್ರಗಳು ಬಂದಿವೆ ಎಂದು ಡಾ. ವಸುಂಧರಾ ಭೂಪತಿ ಆತಂಕ ವ್ಯಕ್ತಪಡಿಸಿದರು.

ಎಸ್‌.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಿಜಯಮ್ಮ, ದಿನೇಶ್‌ ಅಮೀನ್‌ ಮಟ್ಟು, ರುದ್ರಪ್ಪ ಹನಗವಾಡಿ, ಎಲ್‌.ಎನ್‌. ಮುಕುಂದರಾಜ್‌ ಸೇರಿದಂತೆ ಹಲವರು ಸಿಎಂ ಜೊತೆ ತಮ್ಮ ಸಂಕಷ್ಟ ಹೇಳಿಕೊಂಡರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles