Wednesday, November 29, 2023
spot_img
- Advertisement -spot_img

2,454 ಪೊಲೀಸರ ನೇಮಕಕ್ಕೆ ಸಿಎಂ ಗ್ರೀನ್‌ ಸಿಗ್ನಲ್!

ಬೆಂಗಳೂರು: ಪೊಲೀಸ್‌ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2,454 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಹೇಳಿದರು.

ಇಂದು ನಡೆದ ಐಪಿಎಸ್ ಹಿರಿಯ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಅಪರಾಧ ದಳವನ್ನು (ಸಿಸಿಬಿ) ಮತ್ತಷ್ಟು ಬಲಪಡಿಸಲು 230 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

148 ವರ್ಷ ಹಳೆಯದಾದ ಕಮಿಷನರ್ ಕಚೇರಿ ಕಟ್ಟಡ ನವೀಕರಣಕ್ಕೆ ₹3 ಕೋಟಿ, ನಗರ ಸಶಸ್ತ್ರ ಮೀಸಲು ಪಡೆಯ ಪೂರ್ವ ಘಟಕ ಆರಂಭಿಸಲು ₹60 ಕೋಟಿ, ರಾಜ್ಯದಲ್ಲಿ ಪೊಲೀಸ್ ವಾಹನಗಳನ್ನು ಖರೀದಿಸಲು ₹100 ಕೋಟಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಬೆಂಗಳೂರಿನ ಚಿಕ್ಕಬಾಣಾವರ ಉತ್ತರ, ಜ್ಞಾನಭಾರತಿ, ಜೆ.ಪಿ.ನಗರ, ಶೇಷಾದ್ರಿಪುರ ಹಾಗೂ ಸಂಜಯನಗರದಲ್ಲಿ ಹೊಸದಾಗಿ 5 ಸಂಚಾರ ಪೊಲೀಸ್‌ ಸ್ಟೇಷನ್‌ ಹಾಗೂ 6 ಮಹಿಳಾ ಠಾಣೆ ಆರಂಭಿಸಲು ಸರ್ಕಾರ ಗ್ರೀನ್‌ಸಿಗ್ನಲ್‌ ನೀಡಿದೆ.

ಹಿರಿಯ ಅಧಿಕಾರಿಗಳ ಮೇಲೂ ಕ್ರಮ: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಇಡೀ ದೇಶದ ಪತ್ರಕರ್ತರಿಗೆ ಮೋದಿ ನಿಷೇಧ ಹೇರಿದ್ದಾರಲ್ಲ?: ಸಿದ್ದರಾಮಯ್ಯ

ಸಿಬ್ಬಂದಿಗೆ ಅಗತ್ಯವಿದ್ದರೆ, ಹೊಸ ಕಟ್ಟಡಗಳನ್ನು ಒದಗಿಸಲಾಗುವುದು. ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles