ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯ ಗೆ ಪತ್ನಿ ಉಡುಗೊರೆಯಾಗಿ ವಾಚ್ ನೀಡಿದ್ದಾರೆ.
ಧರ್ಮಪತ್ನಿ ಪಾರ್ವತಿ ಉಡುಗೊರೆ ನೀಡಿರುವ RADO ವಾಚ್ ಧರಿಸಿಕೊಂಡು ಸಿದ್ದರಾಮಯ್ಯ ರಾಜೀವ್ ಗಾಂಧಿ ಪುಣ್ಯತಿಥಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಕೆಪಿಸಿಸಿ ಕಚೇರಿಯಲ್ಲಿರುವ ಇಂಧಿರಾಗಾಂಧಿ ಸಭಾಂಗಣದಲ್ಲಿ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಪುಣ್ಯ ತಿಥಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೊಸ ವಾಚ್ ಕಟ್ಟಿಕೊಂಡು ಬಂದಿದ್ದರು.
ಆಕರ್ಷಕವಾಗಿ ಕಾಣಿಸುತ್ತಿದ್ದ ವಾಚ್ ನ್ನು ಡಿಕೆಶಿ ನೋಡಿದ್ದಾರೆ. ಈ ವೇಳೆ ಸಿಎಂ ಆದ ಕಾರಣಕ್ಕೆ ಪತ್ನಿ ವಾಚ್ ಗಿಫ್ಟ್ ಮಾಡಿರುವುದಾಗಿ ಡಿಕೆಶಿ ಹಾಗೂ ಎಂ.ಬಿ. ಪಾಟೀಲ್ ರಲ್ಲಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಈ ವೇಳೆ ಈ ವೇಳೆ ಪತ್ನಿ ಪಾರ್ವತಿ Rado ವಾಚ್ ಗಿಫ್ಟ್ ನೀಡಿದ ವಿಚಾರವನ್ನು ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಪಡೆದು ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆ ಏರಿದೆ. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.