ಬೆಂಗಳೂರು: ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದರು. ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ಆಗಮಿಸಿದ ಅವರು, ಕುಮಾರಸ್ವಾಮಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ದಾರೆ.
ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಅವರಿಗೆ 2 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ. ಹೀಗಾಗಿ ಆಸ್ಪತ್ರೆಗೆ ರಾಜಕೀಯ ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಸಿಎಂ ಸಹ ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಚೆಲುವರಾಯಸ್ವಾಮಿ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ದತ್ತಪೀಠವನ್ನು ಬೇಲಿ ರಹಿತ ಮಾಡೋದೇ ನಮ್ಮ ಸಂಕಲ್ಪ : ಸಚಿವೆ ಶೋಭಾ ಕರಂದ್ಲಾಜೆ
ಹೆಚ್.ಡಿ ರೇವಣ್ಣ ಭೇಟಿ
ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕುಮಾರಸ್ವಾಮಿ ಅವರನ್ನು ಸಹೋದರ ಹೆಚ್.ಡಿ ರೇವಣ್ಣ ಭೇಟಿಯಾದರು. ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಅವರು ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ಸಹ ಇಂದು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.