ತುಮಕೂರು: ಮಹಿಳೆಯರ ಸ್ಥಾನಮಾನ ಬದಲಿಸಿ ಬದಲಾವಣೆ ತರಬಲ್ಲ ಏಕೈಕ ಪಕ್ಷ ಬಿಜೆಪಿ. ಮೋದಿ ಇನ್ನೂ 10-25 ವರ್ಷಗಳ ಕಾಲ ದೇಶವನ್ನು ಮುನ್ನಡೆಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸಿದ್ದಗಂಗಾ ಮಠದಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಯವರ 4ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿಧಾನಸಭೆ ಚುನಾವಣೆಗೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಣಾಳಿಕೆಯನ್ನು ಸಿದ್ಧಪಡಿಸಲಿದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಹೇಳಿದ್ದರೂ, ಅವರೊಬ್ಬರೇ ಮುನ್ನಡೆಸುತ್ತಾರೆ ಎಂದಲ್ಲ. ಪಕ್ಷವು ತಂಡವಾಗಿ ಕೆಲಸ ಮಾಡಲಿದ್ದು, ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದು, ಪಕ್ಷದಲ್ಲಿ ಯಾವುದೇ ಸಂಖ್ಯಾಬಲವಿಲ್ಲ, ಎಲ್ಲರೂ ಉತ್ತಮ ಸಂಘಟಕರು ಮತ್ತು ಸಾಮಾಜಿಕ ಕಾರ್ಯಕರ್ತರಾಗಬೇಕು ಮತ್ತು ಆರ್ಥಿಕ ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ನಿಭಾಯಿಸಿ ವಿಶ್ವ ನಾಯಕರಾಗಿ ಹೊರಹೊಮ್ಮಿರುವ ಪ್ರಧಾನಿ ಮೋದಿ ಕೈಗಳನ್ನು ಬಲಪಡಿಸಬೇಕು ಎಂದರು.