ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ.
ಆಂಜನೇಯ ದೇವರ ಮುಂದೆ ಕುಳಿತು ಭಕ್ತಿಯಿಂದ ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹುಬ್ಬಳ್ಳಿಯ ವಿಜಯನಗರದಲ್ಲಿರುವ ಕೆಂಪಣ್ಣನವರ ಕಲ್ಯಾಣ ಮಂಟಪದ ಆವರಣದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಹನುಮಾನ ಚಾಲೀಸಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ಹೇಳಿತ್ತು. ಇದು ಬಿಜೆಪಿ ನಾಯಕರ ಹಾಗೂ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಕರೆ ನೀಡಲಾಗಿತ್ತು. ಅದರಂತೆ ರಾಜ್ಯದ ವಿವಿಧ ದೇವಾಲಯಗಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಲಾಗಿದೆ.
ಇನ್ನೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರಿನ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಶ್ರೀಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹನುಮಾನ್ ಚಾಲೀಸಾ ಪಠಿಸಿದ್ದಾರೆ.