ಬೆಂಗಳೂರು: ಬಿಜೆಪಿ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ನಾಳೆ, ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯು ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿರುವ ಹಿನ್ನೆಲೆ ಪಟ್ಟಿ ಬಿಡುಗಡೆ ತಡವಾಗುತ್ತಿದೆ ಎನ್ನಲಾಗಿದೆ.
ಪಟ್ಟಿ ರಿಲೀಸ್ ಮತ್ತೆ ಮುಂದಕ್ಕೆ ಹೋಗಿದ್ದರಿಂದ ಶಾಸಕರು ಮತ್ತು ಟಿಕೆಟ್ ಆಕಾಂಕ್ಷಿಗಳಲ್ಲಿ ಆತಂಕ ಹೆಚ್ಚಿದೆ. ಪಟ್ಟಿ ಬಿಡುಗಡೆ ಆಗುವ ತನಕ ಆತಂಕದಲ್ಲೇ ಇರಬೇಕಾದ ಸ್ಥಿತಿ ಆಕಾಂಕ್ಷಿಗಳದ್ದಾಗಿದೆ. ಕೆಲ ಶಾಸಕರು ಟಿಕೆಟ್ ಸಿಗುತ್ತಾ ಇಲ್ವೋ ಅನ್ನೋ ಭಯಕ್ಕೆ ಬಿದ್ದಿದ್ದಾರೆ.ಅಂದಹಾಗೆ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಅಂದಹಾಗೆ ಬಿಜೆಪಿಯವರ ಪಟ್ಟಿ ಬಿಡುಗಡೆ ತಡವಾಗುತ್ತಿರೋದನ್ನು ಅಣಕಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ