ಬೆಂಗಳೂರು: ಸಿದ್ದರಾಮಯ್ಯ ಸ್ಫರ್ಧೆ ಬಗ್ಗೆ ನಾನು ಏನೂ ಮಾತಾಡೋದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಹಿರಿಯ ರಾಜಕಾರಣಿ, ಅವರೇ ಸ್ಪರ್ಧೇ ಬಗ್ಗೆ ನಿರ್ಧರಿಸಬೇಕು , ಸ್ಪರ್ಧೇ ಮಾಡೋದು ಬಿಡೋದು ಅವರಿಗೆ ಬಿಟ್ಟದ್ದು , ಈ ಬಗ್ಗೆ ನಾನು ಏನೂ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಬೇಡವೆಂದು ಹೈಕಮಾಂಡ್ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವನ್ನು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದರು. ಆದರೆ ನನ್ನ ಕುಟುಂಬದವರ ಜೊತೆಗೆ , ಹಿತೈಷಿಗಳ ಜೊತೆಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಹೈಕಮಾಂಡ್ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳಬೇಕು. ಇದರ ಬಗ್ಗೆ ತಂದೆ ಅವರೇ ಸ್ಪಷ್ಟನೆ ನೀಡಬೇಕು ಎಂದು ಯತೀಂದ್ರ ಹೇಳಿದ್ದರು.