ಬೆಳಗಾವಿ: ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ ಪಡೆದಿದ್ದಾರೆ, ಬೆಂಗಳೂರನ್ನ ಹಾಳು ಮಾಡಿದ್ದಾರೆ. ಎನ್ನುವಂತಾಗಿದೆ, ಭ್ರಷ್ಟಾಚಾರ ಕಾಂಗ್ರೆಸ್‌ನ ಅವಿಭಾಜ್ಯ ಅಂಗ. ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವಾಗಿದೆ. ಅವರು ಒಂದು ಕಡೆ ಪ್ರತಿಭಟನೆ ಮಾಡಿದ್ರೆ ಯಾರೂ ಬರಲ್ಲ. ಆದ್ದರಿಂದ ಮುನ್ನೂರು ಕಡೆ ಮಾಡ್ತಿದ್ದಾರೆ ಎಂದಿದ್ದಾರೆ.
ಬೆಂಗಳೂರಲ್ಲಿ ಒತ್ತುವರಿ ಆಗಿದ್ದು, ರಾಜಕಾಲುವೆ ಮುಚ್ಚಿಹೋಗಿದ್ದು, ರಾಜಕಾಲುವೆ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದು ಹೀಗೆ ಹತ್ತು ಹಲವು ಹಗರಣ ಅವರ ಕಾಲದಲ್ಲಿ ಆಗಿವೆ. ಲೋಕಾಯುಕ್ತ ಮುಚ್ಚಿ ಹಾಕಿ ಭ್ರಷ್ಟಾಚಾರಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಇದೆಲ್ಲವನ್ನೂ ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ನಾವು ಸುಮ್ಮನೇ ಕುಳಿತಿದ್ದರೂ ಸಹ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವುದು ನಿಶ್ಚಿತವಾಗಿದೆ. ಹೀಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದರು.