ಬೆಂಗಳೂರು: ಕಾಂಗ್ರೆಸ್ ನ ಚಾರ್ಜ್ ಶೀಟ್ ಕಂಟೆಂಟ್ ನೋಡಿದರೆ ಗೊತ್ತಾಗುತ್ತದೆ. ಇದರಲ್ಲಿ ಯಾವುದೇ ಆಧಾರ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾರ್ಜ್ ಶೀಟ್ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ನಾವು ಅವರ ಮೇಲೆ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದೆವು. ಅದಕ್ಕೆ ಇನ್ನೂ ಉತ್ತರ ಕೊಟ್ಟಿಲ್ಲ. ಮೊದಲು ಅವರ ಕಾಲದ ಕರ್ಮಕಾಂಡಗಳ ಬಗ್ಗೆ ಉತ್ತರ ಕೊಡಬೇಕು.
ಮುಂದಿನ ದಿನಗಳಲ್ಲಿ ನೋಡಿ ಇನ್ನಷ್ಟು ಚಾರ್ಜ್ ಶೀಟ್ ಬರುತ್ತವೆ ಎಂದು ಟಾಂಗ್ ಕೊಟ್ಟರು. ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಿ ನಿನ್ನೆ ಮರಣೋತ್ತರ ಪರೀಕ್ಷೆ, ಯಥಾಸ್ಥಿತಿಗೆ ತರುವ ಕಾರ್ಯಗಳಾಗಿದ್ದು, ಇಂದು ಪ್ರಕರಣ ಸಂಬಂಧಿಸಿ ಹೆಸರುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಈ ಮೂರುವರೆ ವರ್ಷಗಳ ಅಧಿಕಾರದಲ್ಲಿ ಬಿಜೆಪಿ ತಾನು ಕೊಟ್ಟ 600 ಭರವಸೆಗಳ ಪೈಕಿ 550 ಭರವಸೆಗಳನ್ನು ಈಡೇರಿಸಲಿಲ್ಲ. ನಾವು ಈ ಬಗ್ಗೆ ಕಳೆದ ಎರಡು ತಿಂಗಳಿಂದ ಪ್ರತಿನಿತ್ಯ ನಿಮ್ಮ ಹತ್ತಿರ ಉತ್ತರ ಇದೆಯಾ ಎಂದು ಕೇಳುತ್ತಿದ್ದೇವೆ.
ಬಿಜೆಪಿವರು ಉತ್ತರ ನೀಡಲಾಗುತ್ತಿಲ್ಲ. ರಾಜ್ಯದ 2 ಲಕ್ಷ ಯುವಕರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಈ ಬಗ್ಗೆಯೂ ಉತ್ತರ ನೀಡಿಲ್ಲ. 2 ಲಕ್ಷ ಗುತ್ತಿಗೆದಾರರು 40 % ಕಮಿಷನ್ ಕಿರುಕುಳ ತಾಳಲಾಗುತ್ತಿಲ್ಲ ಎಂದು ಧ್ವನಿ ಎತ್ತಿದ್ದಾರೆ. ಅದಕ್ಕೂ ಈ ಸರಕಾರ ಪರಿಹಾರ ನೀಡಲಿಲ್ಲ. ಎಲ್ಲ ವರ್ಗದ ಜನ ಭಯದಲ್ಲಿ ಬದುಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.