ಬೆಂಗಳೂರು: ಕಾಂಗ್ರೆಸ್ ಬಹುಮತ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಜನತೆ ನೀಡಿದ ಅಭಿಪ್ರಾಯ ಗೌರವ ಪೂರ್ವಕವಾಗಿ ಒಪ್ಪಿಕೊಳ್ಳುತ್ತೇವೆ. ಈ ಸೋಲಿನ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ. ಪಕ್ಷಕ್ಕೆ ಆದ ಹಿನ್ನಡೆಯನ್ನು ನಾನೇ ಜವಾಬ್ದಾರಿ ಹೊರುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು. ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದ್ರು, ಕಡಿಮೆ ಸೀಟು ಬಂದಿವೆ. ಏನೇ ಆಗಲಿ ಸೋಲು ಸೋಲು. ನಾವು ಇದರ ಬಗ್ಗೆ ಆತ್ಮಾವಲೋಕನ ಮಾಡಿ ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ.
ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.