ದೊಡ್ಡಬಳ್ಳಾಪುರ: ಸಿಎಂ ಬೊಮ್ಮಾಯಿ ಕುಟುಂಬ ಸಮೇತ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿ ನಾವು ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ ಹಿಡಿಯುತ್ತೇವೆ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಬಲ ಪೈಪೋಟಿ ನೀಡುತ್ತೇವೆ. ವಿಜಯೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂಬ ಜನರ ಅಭಿಪ್ರಾಯ ಕುರಿತು ಅಂತಿಮವಾಗಿ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಚುನಾವಣೆ ಬಗ್ಗೆ ಮಾತನಾಡಿದರು.
ಅಂದಹಾಗೆ ಕಳೆದ ಬಾರಿಯೇ ದೇವಾಲಯಕ್ಕೆ ಬರಬೇಕಿತ್ತು, ಕಾರ್ಯದ ಒತ್ತಡದ ಕಾರಣ ಸಾಧ್ಯವಾಗಿರಲಿಲ್ಲ ಎಂದರು. ಕಾಂಗ್ರೆಸ್‌ನವ್ರು ಅಧಿಕಾರಕ್ಕೆ ಬರ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ, ಸಿದ್ದರಾಮಯ್ಯನವರನ್ನು 2018 ರಲ್ಲಿ ಜನರು ತಿರಸ್ಕಾರ ಮಾಡಿದ್ದಾರೆ. ಈ ಬಾರಿ ಕೂಡ ತಿರಸ್ಕಾರ ಮಾಡುತ್ತಾರೆ ಎಂದು ಸಿಎಂ ಹೇಳಿದರು.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತ ಪ್ರಶ್ನೆಗೆ ಉತ್ತರಿಸಿ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೊಂದು ವಾರದೊಳಗೆ ಬರುತ್ತದೆ ಎಂದರು.