Wednesday, May 31, 2023
spot_img
- Advertisement -spot_img

ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸ್ತೇವೆ: ಸಿಎಂ ಬೊಮ್ಮಾಯಿ

ದಾವಣಗೆರೆ: ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ, ಇದರ ಬಗ್ಗೆ ಕಾಮೆಂಟ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿ, ‘‘ನಮ್ಮ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಹಾಸಂಗಮ‌ ಕಾರ್ಯಕ್ರಮ ನಡೆದಿದೆ, ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯಲಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ವಿದೇಶಗಳಿಗೆ ಹೋಗಿ ಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ, ಯಾವುದೇ ವ್ಯಕ್ತಿಯ ಉಪನಾಮ ಹಿಡಿದುಕೊಂಡು ಒಂದು ಸಮುದಾಯ ಅವಹೇಳನ ಮಾಡುವುದು ಒಬ್ಬ ರಾಜಕಾರಣಿಯಾದವರಿಗೆ ಸರಿಯೇ? ತಪ್ಪು ಮಾಡಿದ್ದಕ್ಕೆ ನ್ಯಾಯಾಲಯ ತೀರ್ಪು ನೀಡಿದೆ, 75 ವರ್ಷದ ಇತಿಹಾಸದಲ್ಲಿ ಈ ರೀತಿ ಯಾರು ಮಾತನಾಡಿಲ್ಲ, ಇದು ದೇಶ ವಿರೋಧಿ ಅಪ್ರಬುದ್ಧ ಹೇಳಿಕೆ ಎಂದು ಹೇಳಿದರು. ಇನ್ನು ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಏಪ್ರಿಲ್ ಮೊದಲನೇ ವಾರದಲ್ಲಿ ಬಹುತೇಕ ಹೊರಬರಲಿದೆ ಎಂದರು.

Related Articles

- Advertisement -

Latest Articles