Thursday, June 8, 2023
spot_img
- Advertisement -spot_img

ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ತಿಳಿಸಿದ್ದಾರೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಮಾರ್ಚ್ 27 ರಂದು ಸ್ಮಾರಕ ಹಾಗೂ ರೇಸ್ ಕೋರ್ಸ್‌ಗೆ ಹೆಸರಿಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು. ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಇದೇ ವರ್ಷ ನಟ ದಿ ಪುನೀತ್ ರಾಜ್ ಕುಮಾರ್ ಸ್ಮಾರಕ ಅಭಿವೃದ್ಧಿ ಮಾಡುತ್ತೇವೆ. ಇದರ ಜೊತೆಗೆ ಅಂಬರೀಶ್ ಅವರ ಸ್ಮಾರಕ ಸಿದ್ಧವಾಗುತ್ತಿದೆ ಎಂದರು.

ಕಾಂತಾರ ಬಗ್ಗೆ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕಾಂತಾರ ಸ್ಥಳೀಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗದುಕೊಂಡು ಹೋಗಿದ್ದು, ಆ ತಂಡಕ್ಕೆ ಅಭಿನಂದನೆಗಳು. ತ್ರಿಬಲ್ ಆರ್ ಸಿನೆಮಾ ಆಸ್ಕರ್ ಪಡೆದಿದ್ದು ನಾವೆಲ್ಲ ಹೆಮ್ಮೆ ಪಡಬೇಕು‌. ಇದರಿಂದ ಆಸ್ಕರ್ ನಮಗೆ ದೂರ ಇಲ್ಲ. ಪ್ರತಿವರ್ಷ ಪಡೆಯಬಹುದು ಅಂತ ತೋರಿಸಿಕೊಟ್ಟಿದೆ.

ಈ ವರ್ಷ ಫೆಸ್ಟಿವಲ್ನಲ್ಲಿ ಉತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದು ತಿಳಿಸಿದರು.

Related Articles

- Advertisement -spot_img

Latest Articles