ಬೆಂಗಳೂರು: ರಾಜ್ಯದಲ್ಲಿ ಎಲ್ಲಿಗೇ ಹೋದರೂ ಬಹುತೇಕ ಜನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೆ ಕರ್ನಾಟಕದಲ್ಲಿ ಸೋಲಿನ ಭೀತಿ ಆರಂಭವಾಗಿದ್ದು,ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳುತ್ತಿವೆ, ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ಜನ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ ಇದರಿಂದ ಬಿಜೆಪಿಗರು ಬೆದರಿದ್ದಾರೆ ಎಂದರು .
ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ. ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ನಾವು ಬಿಜೆಪಿಯ ಹೀನ ರಾಜಕೀಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂಬ ಸಂದೇಶ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ಗೆ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ ಎಂದು ಅಭಿಪ್ರಾಯಪಟ್ಟರು.