ಬೆಂಗಳೂರು: ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿಎಂ ಸಿದ್ದರಾಮಯ್ಯನವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತೋಷ ಹಂಚಿಕೊಂಡಿದ್ದಾರೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮಾಡಿ ಡಿಕೆಶಿ ಹಾಗೂ ಖರ್ಗೆ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಆಡಳಿತವನ್ನು ನೀಡಲಿದ್ದಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ನೂತನ ಸಿಎಂ ಆಗಿ , ಡಿಕೆಶಿಯವರನ್ನು ಡಿಸಿಎಂ ಆಗಿ ಕಾಂಗ್ರೆಸ್ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅಧಿಕೃತವಾಗಿ ಘೋಷಣೆ ಮಾಡಿದರು.
ಸರ್ಕಾರದಲ್ಲಿ ಡಿಕೆಶಿವಕುಮಾರ್ ಏಕೈಕ ಡಿಸಿಎಂ ಆಗಿರಲಿದ್ದಾರೆ, ಜೊತೆಗೆ 2024 ಲೋಕಸಭೆ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.
ಇನ್ನೂ 20 ರಂದು ಪ್ರಮಾಣವಚನ ನಡೆಯಲಿದ್ದು, ಸಿಎಂ, ಡಿಸಿಎಂ , ಸಚಿವರು ಪ್ರತಿಜ್ಞಾವಿಧಿ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಗೆಲುವು ಸಾಧಿಸಿದ ಲಕ್ಷ್ಣಣ ಸವದಿ ಸೇರಿದಂತೆ ಹಲವು ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್‌ನಲ್ಲಿ ಮಂತ್ರಿಗಿರಿ ನೀಡಲು ಪ್ಲಾನ್ ರೆಡಿಯಾಗಿದ್ದು, ಸಂಭಾವ್ಯರ ಹೆಸರು ಹೇಳಲಾಗಿದೆ.