ರಾಮನಗರ: ತಾಲೂಕು ರಚನೆಗೆ ಬಿಜೆಪಿ ಸರ್ಕಾರ ಸಾಕಷ್ಟು ಶ್ರಮಿಸಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದರು. ಹಾರೋಹಳ್ಳಿಯ ‘ಕರ್ನಾಟಕ ಪಬ್ಲಿಕ್ ಶಾಲೆ’ ಆವರಣದಲ್ಲಿ ನಡೆದ ತಾಲೂಕು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ತಾಲೂಕು ರಚನೆಗೆ ಸಾಕಷ್ಟು ಶ್ರಮ ವಹಿಸಲಾಗಿದೆ. ಬಿಜೆಪಿಯಿಂದ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಆಗಿದೆ ಎಂದರು. ರಾಮನಗರ ಎಂಜಿನಿಯರಿಂಗ್ ಕಾಲೇಜನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ಜಿಲ್ಲೆಯಲ್ಲಿ 1850 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಇವುಗಳನ್ನೆಲ್ಲ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಗರಂ ಆದ ಅನಿತಾ ಕುಮಾರಸ್ವಾಮಿ ತಾಲೂಕು ರಚನೆಗೆ ನಾನು ಶ್ರಮಿಸಿದ್ದು ನಾನು ಎಂದು ಪ್ರತ್ಯುತ್ತರ ಕೊಟ್ಟರು. ಜತೆಗೆ, ಕೆಲವು ದಾಖಲೆಗಳನ್ನೂ ಸಾರ್ವಜನಿಕವಾಗಿ ಪ್ರದರ್ಶಿಸಿದರು. ಕುಮಾರಸ್ವಾಮಿ ಶಾಸಕರಾದ ಮೇಲೆ ಅಭಿವೃದ್ಧಿ ಆಗಿರುವುದು ಎಲ್ಲರಿಗೂ ತಿಳಿದಿದೆ, ರಾಮನಗರಕ್ಕೆ 450ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಕೊಟ್ಟಿದ್ದೇವೆ ಎಂದು ಹೇಳಿದರು. ಆದರೆ ಇದು ಬಿಜೆಪಿ ಬರುವ ಮೊದಲೇ ಆಗಿತ್ತು ಅಂತಾ ವಿವರಿಸಿದರು.