Wednesday, May 31, 2023
spot_img
- Advertisement -spot_img

ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ ಹೀಗಾಗಿ ಇದರ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.

ಹಿಂದೆ ಇದೇ ರೀತಿ ಮಾತಾಡಿ ಕಾಶ್ಮೀರ ದೂರ ಮಾಡಿದ್ರಿ. ಕಾಶ್ಮೀರ ಭಾರತದಿಂದ ದೂರ ಉಳಿಯಿತು. ಕಾಶ್ಮೀರದಲ್ಲಿ ಬೇರೆಯ ಧ್ವಜ ಇತ್ತು. ಮೊನ್ನೆ 370 ತಂದ ಬಳಿಕ ಕಾಶ್ಮೀರ ಭಾರತದ ಭಾಗ ಆಯ್ತು. ಸೋನಿಯಾ ಅವರ ನಿರ್ಧಾರ ಏನು ಅಂತ ತಕ್ಷಣ ಹೇಳಬೇಕು. ಇದನ್ನ ದೇಶ ನೋಡ್ತಿದೆ. ಭಾರತದ ವಿರುದ್ಧ ಮಾತನಾಡುವ ಕೆಲಸ ಸೋನಿಯಾ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಲ್ಲಿ ಕಾಂಗ್ರೆಸ್​ನವರು ಅಧಿಕಾರಕ್ಕೆ ಬಂದರೇ ಅಭಿವೃದ್ಧಿ ಮಾಡೋಕೆ ಬಿಡಲ್ಲ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಕರ್ನಾಟಕದಿಂದ ಕಿಸಾನ್ ಸಮ್ಮಾನ್ ಯೋಜನೆಗೆ 17 ಅರ್ಜಿಗಳು ಮಾತ್ರ ಬಂದಿದ್ದವು. ನಾವು ಬಂದ ಮೇಲೆ 50,000ಕ್ಕೂ ಹೆಚ್ಚು ಫಲಾನುಭವಿಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ನೆರವು ನೀಡಿದ್ದೇವೆ ಎಂದರು.

Related Articles

- Advertisement -

Latest Articles