Monday, December 4, 2023
spot_img
- Advertisement -spot_img

ವಿದ್ಯುತ್ ಕಳ್ಳತನದ ಕಾಂಗ್ರೆಸ್ ಆರೋಪಕ್ಕೆ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ ವಿದ್ಯುತ್‌ ಕಳ್ಳತನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್(ಟ್ವಿಟ್ಟರ್)ನಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಯಿಂದ ವಿದ್ಯುತ್‌ ಕಳ್ಳತನ: ವಿಡಿಯೋ ಸಹಿತ ಆರೋಪಿಸಿದ ಕಾಂಗ್ರೆಸ್‌

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರು: ಸಿಎಂ ಸಿದ್ದರಾಮಯ್ಯ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles