ನವದೆಹಲಿ: ರಾಹುಲ್‌ಗೆ ನೀಡಿರುವ ಝಡ್‌ಪ್ಲಸ್ ಭದ್ರತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ದೆಹಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸೂಕ್ಷ್ಮ ಪ್ರದೇಶಗಳಾದ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿ ಯಾತ್ರೆ ಹಾಗೂ ರಾಹುಲ್ ಗಾಂಧಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಕೋರಿದ್ದಾರೆ.
ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಹಲವು ಬಾರಿ ಭದ್ರತಾ ಲೋಪ ಸಂಭವಿಸಿದೆ. ‘ಭಾರತ್ ಜೋಡೋ ಯಾತ್ರೆಯು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹರಡುವ ಪಾದಯಾತ್ರೆಯಾಗಿದ್ದು, ಸರ್ಕಾರವು ಇದರಲ್ಲಿ ದ್ವೇಷ ರಾಜಕಾರಣ ಮಾಡಬಾರದು ಎಂದು ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮನವಿ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಉತ್ತರಪ್ರದೇಶದಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವಂತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಎಸ್‌ಪಿಯ ಮಾಯಾವತಿ, ಆರ್‌ಎಲ್‌ಡಿಯ ಜಯಂತ್ ಸಿಂಗ್‌ಗೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಆಹ್ವಾನವನ್ನು ಮೂವರು ನಾಯಕರು ಒಪ್ಪಿರುವ ಅಥವಾ ತಿರಸ್ಕರಿಸಿರುವ ಮಾಹಿತಿ ಹೊರಬಿದ್ದಿಲ್ಲ.
ಇನ್ನು, ಜೀವನ ಸಂಗಾತಿ ಹೇಗಿರಬೇಕು ಎಂಬ ಕುರಿತು ಮೊದಲ ಬಾರಿಗೆ ಮೌನ ಮುರಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ, ಅಜ್ಜಿ ಇಂದಿರಾ ಗಾಂಧಿಯವರ ಗುಣ ಹೊಂದಿರುವ ಮಹಿಳೆಗೆ ಜೀವನ ಸಂಗಾತಿಯಾಗಿ ಆದ್ಯತೆ ನೀಡುವುದಾಗಿ ಹೇಳಿದ್ದಾರೆ.