ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉತ್ಸಾಹದಲ್ಲಿದ್ದು, ಈ ನಿಟ್ಟಿನಲ್ಲಿ ಇಂದು (ಸೆ.3) ಪ್ರಚಾರ ಸಮಿತಿಯ ಸಭೆ ಕರೆದಿದೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಗಳ ಪದಾಧಿಕಾರಿಗಳ ಸಭೆ ನಡೆಯಲಿದೆ. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಸಭೆಯ ನೇತೃತ್ವ ವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಭೆ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ಪ್ರಚಾರ ಸಮಿತಿಯ ಸಮನ್ವಯಕಾರ ಎ.ಪಿ ಬಸವರಾಜ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : NWKRTC ಬಸ್‌ಗಳಲ್ಲೂ ಟಿಕೆಟ್‌ಗೆ UPI ವ್ಯವಸ್ಥೆ!
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ದುಡಿದ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸುವ ಸಲುವಾಗಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಕೂಡ ಲೋಕಸಮರಕ್ಕೆ ಸಜ್ಜಾಗುವ ನಿಟ್ಟಿನಲ್ಲಿ ಅಲರ್ಟ್ ಆಗಿದೆ. ಇತ್ತೀಚಿಗೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ನೇತೃತ್ವದಲ್ಲಿ ಇತ್ತೀಚೆಗೆ ಸಭೆ ನಡೆಸಿದೆ. ಆದರೆ, ಸಂತೋಷ್ ಸಭೆಗೆ ಬಿಜೆಪಿಯ ಹೆಚ್ಚಿನ ನಾಯಕರು ಗೈರಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.