Wednesday, March 22, 2023
spot_img
- Advertisement -spot_img

ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಮಾ.17ಕ್ಕೆ ಪ್ರಕಟಿಸುವ ಸಾಧ್ಯತೆ ಇದೆ : ಸಿದ್ದರಾಮಯ್ಯ

ಬೆಂಗಳೂರು : ಮಾರ್ಚ್‌ 17ರಂದು ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸೂಚನೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಗೆಲುವಿನ ಸಾಧ್ಯತೆಯೇ ಅಭ್ಯರ್ಥಿಗಳ ಆಯ್ಕೆಗೆ ಪರಿಗಣಿಸಿದ ಮಾನದಂಡವಾಗಿದೆ. ಮಾರ್ಚ್‌ 17ರಂದು ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದೆ. ಅಂದೇ, ಮೊದಲ ಹಂತದ ಪಟ್ಟಿ ಪ್ರಕಟವಾಗಬಹುದು” ಎಂದು ಹೇಳಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಪಡೆಯಲು ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಮಾರ್ಚ್‌ 16 ಮತ್ತು ಮಾರ್ಚ್‌ 17ರಂದು ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಾ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ. ಮಾ.16 ರಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ’ ಎಂದು ಡಿಕೆ ಶಿವಕುಮಾರ್‌ ಹೇಳಿದ್ದರು.

ಟಿಕೆಟ್‌ಗಾಗಿ 1230 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ಪರಿಶೀಲಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್‌ ತಯಾರಿಸಿದೆ. ಇದರಲ್ಲಿ ಇನ್ನೊಂದಿಷ್ಟು ಜನರನ್ನು ಡಿಲಿಟ್ ಹಾಗೂ ಸೇರಿಸುವ ಕೆಲಸ ನಡೆಯುತ್ತದೆ ಎಂದಿದ್ದಾರೆ.

Related Articles

- Advertisement -

Latest Articles