ಶಿವಮೊಗ್ಗ : ಪಾರ್ಲಿಮೆಂಟ್ ಚುನಾವಣೆಯ ಒಳಗೆ ಅಥವಾ ಬಳಿಕ ಕಾಂಗ್ರೆಸ್ ಅಧಿಕಾರದಲ್ಲಿರಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ನಾಯಕ ಬಿ.ಎಲ್. ಸಂತೋಷ್ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಗುರವಾಗಿ ಮಾತನಾಡಿದ್ದಾರೆ. ಆದರೆ ಬಿ.ಎಲ್.ಸಂತೋಷ್ ಆಧಾರವಿಲ್ಲದೆ ಮಾತನಾಡುವುದಿಲ್ಲ, ಈಗಾಗಲೇ ಅವರ ಪಕ್ಷದ ಅನೇಕ ಶಾಸಕರು ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Prajwal Revanna Disqualified: ಮೇಲ್ಮನವಿ ಬಗ್ಗೆ ಪ್ರಜ್ವಲ್ ನಿರ್ಧರಿಸ್ತಾರೆ: ಹೆಚ್.ಡಿ.ರೇವಣ್ಣ
ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಸ್ವತಃ ಪ್ರಿಯಾಂಕ್ ಖರ್ಗೆಯವರೇ ಈ ವರ್ಷ ಅಭಿವೃದ್ಧಿಗೆ ಯಾವುದೇ ಹಣ ಇಲ್ಲ ಎಂದು ಹೇಳಿದ್ದಾರೆ. ಇನ್ನು ಈ ಸರ್ಕಾರಕ್ಕೆ ನಾಚಿಕೆಯಾಗಬೇಕು. ಮುಗ್ಧ ಜನರಿಗೆ ಟೋಪಿ ಹಾಕಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಬರಗಾಲ ಬಂದಿದ್ದರೂ ಒಬ್ಬನೇ ಒಬ್ಬ ಮಂತ್ರಿ ರೈತರ ಬಳಿಗೆ ತೆರಳಿ ಅವರ ಕಷ್ಟ ಸುಖ ವಿಚಾರಿಸಿಲ್ಲ. ಭಂಡತನದಿಂದ ಸರ್ಕಾರ ನಡೆಸುತ್ತಾ ಇದ್ದಾರೆ. ತಿಹಾರ್ ಜೈಲಿನಲ್ಲಿ ಇದ್ದು ಬಂದವರು ಬೇರೆ ಜನಪ್ರತಿನಿಧಿಗಳಿಗೆ ವೇದಾಂತ ಹೇಳುತ್ತಿದ್ದಾರೆ ಎಂದು ಕುಟುಕಿದ್ದಾರೆ. ಹಿಂದೆ ಎರಡು ವರ್ಷಗಳ ಕಾಲ ಎಐಸಿಸಿ ಅಧ್ಯಕ್ಷರೇ ಇರಲಿಲ್ಲ. ಈಗಾಗಲೇ ನಿಮ್ಮ ಪಕ್ಷದ ಶಾಸಕರಿಗೆ ಪಕ್ಷದ ಮೇಲೇ ವಿಶ್ವಾಸವಿಲ್ಲ. ರಾಜ್ಯದಲ್ಲಿ ಮತ್ತೆ ನೂರಕ್ಕೆ ನೂರು ಆಪರೇಷನ್ ಕಮಲ ನಡೆದೇ ನಡೆಯುತ್ತದೆ. ಈ ದೇಶದಲ್ಲಿ ಕಾಂಗ್ರೆಸ್‍ಗೆ ಭವಿಷ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.