Saturday, June 10, 2023
spot_img
- Advertisement -spot_img

ಕಾಂಗ್ರೆಸ್ ಸೇರ್ಪಡೆಯಾದ ಮಂಜುನಾಥ್ ಕುನ್ನೂರು, ಜೆಡಿಎಸ್ ನಾಯಕ ದೇವರಾಜ್

ಬೆಂಗಳೂರು: ಮಾಜಿ ಸಂಸದ ಶಿಗ್ಗಾಂವಿಯ ಮಂಜುನಾಥ್ ಕುನ್ನೂರು, ಕೆ.ಆರ್ ಪೇಟೆ ಜೆಡಿಎಸ್ ಮುಖಂಡ ದೇವರಾಜ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ನಂತರ ಡಿಕೆಶಿವಕುಮಾರ್ ಮಾತನಾಡಿ, ನಮ್ಮ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದರು. ನೀವು ನಮ್ಮ ಪಕ್ಷದ ಹಳೆಯ ಮುಖಂಡರು, ಕಾರ್ಯಕರ್ತರ ಜತೆ ಬೆರೆತು ಕೆಲಸ ಮಾಡಬೇಕು. ಈಗಾಗಲೇ ಡಾ. ಎಂ.ಸಿ ಸುಧಾಕರ್ ರನ್ನು ಚಿಂತಾಮಣಿ ಅಭ್ಯರ್ಥಿ ಎಂದು ಘೋಷಿಸಿದ್ದೇವೆ. ಅವರ ಪರ ಕೆಲಸ ಮಾಡಬೇಕು. ಕಾಂಗ್ರೆಸ್ ಗ್ಯಾರಂಟಿಗಳನ್ನು ಪ್ರತಿ ಮನೆಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ತತ್ತ್ವ ಸಿದ್ಧಾಂತಗಳ ಮೇಲೆ ನಂಬಿಕೆಯಿಟ್ಟು ಶಿಗ್ಗಾಂವಿ ಮಾಜಿ ಸಂಸದ ಹಾಗೂ ಬಿಜೆಪಿ ನಾಯಕ ಶ್ರೀ ಮಂಜುನಾಥ್‌ ಕುನ್ನೂರು, ಪುತ್ರ ಶ್ರೀ ರಾಜು ಕುನ್ನೂರು, ಚಿಂತಾಮಣಿಯ ನಾಯಕರಾದ ಶ್ರೀ ಎಂ.ಸಿ ಸುಧಾಕರ್ ಹಾಗೂ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ನಾಯಕರಾದ ಶ್ರೀ ಬಿ.ಎಲ್. ದೇವರಾಜು ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಿದೆ ಎಂದು ಡಿಕೆ ಶಿವಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಮಂಜುನಾಥ್ ಕುನ್ನೂರು ಶಿಗ್ಗಾಂವಿ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿದ್ದರು. 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾದರು. ಕುನ್ನೂರು ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ಶಾಕ್ ನೀಡಿದ್ದಾರೆ.

Related Articles

- Advertisement -spot_img

Latest Articles