ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಶ್ರೀ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಜ್ವರ ಮತ್ತು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ. ಸೋನಿಯಾ ಗಾಂಧಿ ಅವರಿಗೆ ವಿಪರೀತ ಜ್ವರ ಇದ್ದು, ಅವರನ್ನು ತಪಾಸಣೆ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
71 ವರ್ಷದ ಸೋನಿಯಾ ಗಾಂಧಿ ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಸೋನಿಯಾ ಗಾಂಧಿಯವರನ್ನು ನುರಿತ ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿದೆ. ಸದ್ಯ ವೈದ್ಯರ ನಿಗಾದಲ್ಲಿರುವ ಗಾಂಧಿ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಸೋನಿಯಾ ಗಾಂಧಿ ಆರೋಗ್ಯ ಜನವರಿಯಲ್ಲಿ ಏರುಪೇರಾಗಿತ್ತು. ಆಗಲೂ ಅವರನ್ನು ದೆಹಲಿ ಶ್ರೀಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಈ ವರ್ಷದಲ್ಲಿ ಸೋನಿಯಾ ಗಾಂಧಿ ಎರಡನೇ ಬಾರಿಗೆ ಆಸ್ಪತ್ರೆ ದಾಖಲಾಗುತ್ತಿದ್ದಾರೆ.
2023ರ ಜನವರಿ ತಿಂಗಳಲ್ಲಿ ಸೋನಿಯಾ ಗಾಂಧಿ ಶಾಸಕೋಶ ಸೋಂಕಿನಿಂದ ಬಳಲಿದ್ದರು.ಹೀಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಚಿಕಿತ್ಸೆ ಬಳಕ ಸೋನಿಯಾ ಗಾಂಧಿ ಸುಧಾರಿಸಿಕೊಂಡಿದ್ದರು. ಇದಕ್ಕೂ ಮೊದಲು ಸೋನಿಯಾ ಗಾಂಧಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆ ದಾಖಲಾಗಿದ್ದರು.