Sunday, March 26, 2023
spot_img
- Advertisement -spot_img

ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರ ಬಂಧನ

ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಹೊಸಪೇಟೆ ಪಟ್ಟಣ ಪೊಲೀಸರು ಯೋಗಲಕ್ಷ್ಮಿ ಮತ್ತು ಇನ್ನೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಹಿಂದೆಯೂ ಕೂಡಾ ಈ ಇಬ್ಬರ ನಡುವೆ ಹಲವಾರು ಬಾರಿ ಜಗಳ ನಡೆದಿತ್ತು. ಇದೀಗ ಈ ಹಿಂದಿನ ದ್ವೇಷಕ್ಕೆ ಮತ್ತೊಮ್ಮೆ ಜಗಳವಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಜನವರಿ 3 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಸಭೆ ನಡೆಸಲಾಗಿತ್ತು. ಈ ವೇಳೆ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಶಿಲ್ಪಾ ನಡುವೆ ಮಾರಾಮಾರಿ ನಡೆದಿತ್ತು. ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು.

ಆ ಬಳಿಕ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು .

Related Articles

- Advertisement -

Latest Articles