ಹುಬ್ಬಳ್ಳಿ: ಮೋದಿಯವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಕಾಂಗ್ರೆಸ್ ನವರು ವಿಚಲಿತಗೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ನರೇಂದ್ರ ಮೋದಿ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್‌ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
7ನೇ ವೇತನ ಆಯೋಗ ಜಾರಿ ವಿಚಾರವಾಗಿ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ. ಮಧ್ಯಂತರ ವರದಿ ಬಂದ ಕೂಡಲೇ ಜಾರಿಯಾಗುತ್ತದೆ. 2023-24ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನಾಳೆಯಿಂದ ಮಾರ್ಚ್ 4ರವರೆಗೆ ಬಿಜೆಪಿ ರಥಯಾತ್ರೆ ಪ್ರಾರಂಭವಾಗಲಿದ್ದು, ಎಲ್ಲಾ ಮತ ಕ್ಷೇತ್ರಗಳಿಗೆ ಭೇಟಿ ನೀಡಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶವಾಗಲಿದೆ. ಈ ರಥಯಾತ್ರೆ ಸಂದರ್ಭದಲ್ಲಿ ಹಲವಾರು ಜನ ಭಾಗವಹಿಸಲಿದ್ದಾರೆ ಎಂದರು. ಚುನಾವಣೆಗೆ ಸ್ಪರ್ಧಿಸುವರ ಪಟ್ಟಿ ಸಂಸದೀಯ ಮಂಡಳಿ ತೀರ್ಮಾನ ಮಾಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.