Wednesday, March 22, 2023
spot_img
- Advertisement -spot_img

ಕಾಂಗ್ರೆಸ್‌ ನಾಯಕರದ್ದು ಡರ್ಟಿ ಪಾಲಿಟಿಕ್ಸ್‌: ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷದಿಂದ ನಡೆಸುತ್ತಿರುವ ಪೇ ಸಿಎಂ ಅಭಿಯಾನವೊಂದು ಡರ್ಟಿ ಪಾಲಿಟಿಕ್ಸ್. ಪೇ ಸಿಎಂ ಅಭಿಯಾನ ಕಾಂಗ್ರೆಸ್ ನಾಯಕರ ನೈತಿಕ ಅಧಃಪತನ ತೋರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠದಲ್ಲಿ ನಡೆಯುತ್ತಿರುವ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪೇ ಸಿಎಂ ಅಭಿಯಾನ ಕಾಂಗ್ರೆಸ್ ನಾಯಕರ ನೈತಿಕ ಅಧಃಪತನ ತೋರಲಿದೆ. ಪೇ ಸಿಎಂ ಅಭಿಯಾನದ ಬಗ್ಗೆ ಕಾನೂನು ಕ್ರಮಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದ್ದು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಪಿಎಫ್‍ಐ ಮತ್ತು ಎಸ್‍ಡಿಪಿಐ ಕಚೇರಿ, ಮುಖಂಡರ ಮನೆ ಮೇಲೆ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಎನ್‍ಐಎ ಹಾಗೂ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದರು. ಇನ್ನು ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಸಮೀಕ್ಷೆಗಳು ನಡೆಸಲಾಗುತ್ತಿದ್ದು, ಇದರಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆ ಗಳಿಸಲಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. 35 ವರ್ಷ ನಾವೂ ರಾಜಕಾರಣ ಮಾಡಿದ್ದು, ಮುಂದಿನ ದಿನಗಳಲ್ಲಿ ತಾವುಗಳೇ ನೋಡುತ್ತೀರಾ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

Related Articles

- Advertisement -

Latest Articles